ಕಟ್ಟಡಗಳ ಉದ್ಘಾಟನಾ ಕಾರ್ಯಕ್ರಮ

ದಿನಾಂಕ ೧೧-೦೩-೨೦೨೩ ರಂದು ಸಂಘದ ನೂತನ ವ್ಯಾಪಾರಂಗಣ , ಕಟ್ಟಡ ನಿರ್ಮಾಣ ಸಾಮಗ್ರಿ ವಿಭಾಗ , ಹಾಗೂ ಗೌರವ ಸನ್ಮಾನ ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷರಾದ ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಉದ್ಘಾಟಿಸಿ ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಸಹಕಾರಿ ಕ್ಷೇತ್ರದ ಪಾವಿತ್ರತೆಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿಕೊಂಡು ಬರುತ್ತಿದೆ ಎಂದರು.
ಮುಂಬರುವ ದಿನಗಳಲ್ಲಿ ಕೃಷಿಯಲ್ಲಿ ಬರುವ ಸವಾಲುಗಳನ್ನು ಎದುರಿಸಲು ರೈತರು ಸಿಧ್ಧರಿರಬೇಕು.ಸಹಕಾರಿ ಸಂಘಗಳು ಕೃಷಿಯನ್ನು ಯಾಂತ್ರಿಕರಣಗೊಳಿಸಲು ರೈತರನ್ನು ಪ್ರೋತ್ಸಾಹಿಸಬೇಕು . ರೈತರು ಬೆಳೆದ ಬೆಳೆಗೆ ಉತ್ತಮ ಮಾರುಕಟ್ಟೆ ಕಲ್ಪಿಸಲು ಸಹಕರಿಸಬೇಕು , ತಾಲ್ಲೂಕಿನಲ್ಲಿ ಟಿ .ಎಂ .ಎಸ್ ರೈತರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
ಶಿವಮೊಗ್ಗ ಕೆ ಆರ್ ಎಂ ಅಧ್ಯಕ್ಷ ಶ್ರೀ ಹೆಚ್ ಎಸ್ ಮಂಜಪ್ಪ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಟಿ ಎಂ ಎಸ್ ಅಧ್ಯಕ್ಷರಾದ ಶ್ರೀ ಆರ್ ಎಂ ಹೆಗಡೆ ಬಾಳೇಸರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಸಹಕಾರಿ ಮಹಾ ಮಂಡಳಿ ಉಪಾಧ್ಯಕ್ಷ ರಾದ ಶ್ರೀ ಶಿವಕುಮಾರ್ ಗೌಡ ಪಾಟೀಲ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶ್ರೀ ವಿ.ಎನ್ ಭಟ್ ಅಳ್ಳಂಕಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

Leave a Comment

Your email address will not be published. Required fields are marked *